ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದು ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುತ್ತಿದ್ದು, ಅನೇಕ ಪ್ರಮುಖ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ.
ಈಗಾಗಲೇ ಸಚಿವ ಸ್ಥಾನಕ್ಕೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ, ರಾಜ್ಯ ಖಾತೆ ಸಚಿವ ಸಂಜಯ್ ದಾಹೊತ್ರಾ, ಕಾರ್ಮಿಕ ಸಚಿವ ಸಂತೋಷ್ ಗಂಗಾವರ್, ತಾವರ್ಚಂದ್ ಗೆಹ್ಲೋಟ್ ರಾಜೀನಾಮೆ ನೀಡಿದ್ದಾರೆ.