ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳೆಷ್ಟು ಗೊತ್ತೇ?

Prasthutha|

- Advertisement -

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆ ಹಾಗೂ ಸಚಿವಾಲಯಗಳಲ್ಲಿ ಒಟ್ಟು 8.72 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಲಿಖಿತ ರೂಪದಲ್ಲಿ ರಾಜ್ಯ ಸಭೆಗೆ ಮಾಹಿತಿ ನೀಡಿದ ಅವರು, 2018-19 ಹಾಗೂ 2020-21ನೇ ಸಾಲಿನಲ್ಲಿ ಒಟ್ಟು 2,65,468 ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಿಗೆ SSC, UPSC ಹಾಗೂ RRB ನೇಮಕ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

- Advertisement -

ಇದೇ ವಿಚಾರವಾಗಿ ಮಾತನಾಡಿರುವ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ದೇಶದಲ್ಲಿ ವ್ಯಾಪಕವಾದ ನಿರುದ್ಯೋಗ ಸಮಸ್ಯೆ ಇದೆ. ದೊಡ್ಡ ದೊಡ್ಡ ಕಾರ್ಖಾನೆಗಳು ಮುಚ್ಚುತ್ತಿರುವ ಕಾರಣ ಉದ್ಯೋಗ ಸಮಸ್ಯೆ ಉದ್ಭವವಾಗಿದ್ದು, ಅನೇಕ ಯುವಕರು ಸಂಕಷ್ಟದಲ್ಲಿದ್ದಾರೆ. ಸದ್ಯ ಕೇಂದ್ರದಲ್ಲಿ 9 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.

Join Whatsapp