May 13, 2021

ನಮಗೆ ಬೇಕಾದಷ್ಟು ವ್ಯಾಕ್ಸಿನ್ ಉತ್ಪಾದನೆಯಾಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ? ಕೇಂದ್ರ ಸಚಿವ ಸದಾನಂದ ಗೌಡರ ಬೇಜವಾಬ್ದಾರಿಯುತ ಹೇಳಿಕೆ

ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾಗದಿದ್ದರೆ ನಾವೇನು ನೇಣುಹಾಕಿಕೊಳ್ಳಬೇಕಾ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,ಹೈಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರವಿನ್ನೂ ಪೂರ್ತಿಯಾಗಿ ಕರ್ನಾಟಕಕ್ಕೆ ವ್ಯಾಕ್ಸಿನ್ ಪೂರೈಸಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಲಯ ಇಷ್ಟು ವ್ಯಾಕ್ಸಿನ್ ಕೊಡಿ ಅಷ್ಟು ಕೊಡಿ ಎಂದು ಹೇಳುತ್ತದೆ. ಕೋರ್ಟ್ ಹೇಳಿದೆಯೆಂದ ಮಾತ್ರಕ್ಕೆ ವ್ಯಾಕ್ಸಿನ್ ಉತ್ಪಾದನೆ ಸಾಕಷ್ಟು ಪ್ರಮಾಣದಲ್ಲಿ ಮಾಡಲಾಗದಿದ್ದರೆ ನೇಣುಹಾಕಿಕೊಳ್ಳಬೇಕೇ? ಎಂದು ಪ್ರಶ್ನಿಸಿದರು.

ರಾಜಕೀಯ ಲಾಭಕ್ಕಾಗಿ ನಾವು ಪ್ಲಾನ್ ಆಫ್ ಆಕ್ಷನ್ ಮಾಡಿಲ್ಲ. ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇವೆ‌. ಸಾಕಷ್ಟು ಪ್ರಮಾಣದಲ್ಲಿ ಉತ್ಪಾದನೆ ಆಗಲಿಲ್ಲ. ಅದು ನಮ್ಮ‌ ಪ್ರಯತ್ನ ಮೀರಿದ್ದಾಗಿದೆ. ಕಳೆದ ಬುಧವಾರದವರೆಗೆ ಕರ್ನಾಟಕದಲ್ಲಿ ಇನ್ನು 98,000 ಡೋಸ್ ವ್ಯಾಕ್ಸಿನ್ ಸಂಗ್ರಹವಿದೆ. ಕೇಂದ್ರದಿಂದ ಇನ್ನು 75,000 ಡೋಸ್ ಬರಬೇಕಾಗಿದೆ. ಇದುವರೆಗೆ ಒಂದು ಕೋಟಿ ಹದಿನೆಂಟು ಲಕ್ಷಕ್ಕೂ ಹೆಚ್ಚು ಲಸಿಕೆ ಕೊಡಲಾಗಿದೆ. ನೇರವಾಗಿ ಪ್ರಧಾನಿಯವರೇ ವ್ಯಾಕ್ಸಿನೇಷನ್ ಅಭಿಯಾನದ ಉಸ್ತುವಾರಿ ವಹಿಸಿದ್ದಾರೆ. ಇನ್ನು ಒಂದು ವಾರದೊಳಗೆ ಗೊಂದಲ ಬಗೆ ಹರಿಯುತ್ತದೆ. ಅದಕ್ಕಾಗಿಯೇ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನಿಲ್ಲಿಸಲಾಗಿದೆ‌. ನಲವತ್ತೈದು ವರ್ಷ ಮೇಲ್ಪಟ್ಟವರಿಗೆ ಈಗ ವ್ಯಾಕ್ಸಿನೇಷನ್ ಮುಂದುವರಿಸಲಾಗಿದೆ ಎಂದು ಡಿ.ವಿ.ಸದಾನಂದಗೌಡ ತಿಳಿಸಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!