2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ಲಕ್ಷ್ಮೀಶ ತೋಳ್ಪಾಡಿಗೆ ಒಲಿದ ಗೌರವ

Prasthutha|

ಬೆಂಗಳೂರು: 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಕನ್ನಡ ವಿಭಾಗದಲ್ಲಿ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರ ಕೃತಿಗೆ ಪ್ರಶಸ್ತಿ ಸಂದಿದೆ.ಅವರ ‘ಮಹಾಭಾರತ ಅನುಸಂಧಾನ ಭಾರತ ಯಾತ್ರೆ’ ಎನ್ನುವ ಪ್ರಬಂಧಕ್ಕೆ ಪ್ರಶಸ್ತಿಯ ಗರಿಮೆ ದೊರೆತಿದೆ.

- Advertisement -

ಸಾಹಿತ್ಯ ಅಕಾಡೆಮಿ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಬುಧವಾರ (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.

ಮಾರ್ಚ್.12, 2024ರಲ್ಲಿ ನವದೆಹಲಿಯ ಕಾಮಿನಿ ಸಭಾಂಗಣದಲ್ಲಿ ನಡೆಯುವಂತ ಸಮಾರಂಭದಲ್ಲಿ ಒಂದು ಲಕ್ಷ ರೂ. ಮತ್ತು ಪ್ರಶಸ್ತಿ ಪತ್ರವನ್ನು ಪ್ರದಾನ ಮಾಡಲಾಗುತ್ತದೆ.

- Advertisement -

ಲೇಖಕ, ಚಿಂತಕ ಮತ್ತು ವಿದ್ವಾಂಸರಾಗಿರುವ ಲಕ್ಷ್ಮೀಶ ತೋಳ್ಪಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರು.



Join Whatsapp