Home ಟಾಪ್ ಸುದ್ದಿಗಳು ಕೋವಿಡ್ ನಿಂದ ಸಾವಿಗೀಡಾದವರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ಕೋವಿಡ್ ನಿಂದ ಸಾವಿಗೀಡಾದವರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ಘೋಷಿಸಿದ ಕೇಂದ್ರ ಸರಕಾರ

ನವದೆಹಲಿ: ಕೋವಿಡ್‌ನಿಂದ ಸಾವಿಗೀಡಾದವರ ಕುಟುಂಬಕ್ಕೆತಲಾ 50 ಸಾವಿರ ಪರಿಹಾರವನ್ನು ಕೇಂದ್ರ ಸರಕಾರ ಘೋಷಿಸಿದೆ. ಅಲ್ಲದೇ ನೆರವು ನೀಡುವುದಕ್ಕಾಗಿ ರಾಜ್ಯಗಳು ಅನುಸರಿಸಬೇಕಾದ ಮಾರ್ಗಸೂಚಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿದ್ಧಪಡಿಸಿದೆ. ಸುಪ್ರೀಂ ಕೋರ್ಟ್‌ ಜೂನ್ 30ರಂದು ನೀಡಿದ ತೀರ್ಪಿನ ಅನುಗುಣವಾಗಿ ಈ ಮಾರ್ಗಸೂಚಿ ರೂಪಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪರಿಹಾರ ಧನವನ್ನು ಕೋವಿಡ್ ಮೃತ ವ್ಯಕ್ತಿಯ ಕೋವಿಡ್ ಪ್ರಮಾಣಪತ್ರವನ್ನ ನೀಡಿ ಪಡೆಯಬಹುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರೂಪಿಸಿರುವ ಪ್ರಮಾಣಪತ್ರವೇ ಪಡೆದಿರಬೆಕು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಧ್ದಪಡಿಸಿದ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.

ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮೊತ್ತವನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರಕಾರಗಳಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಕೋವಿಡ್ ಮೃತ ಪ್ರಮಾಣಪತ್ರ ಮತ್ತು ಇತರ ದಾಖಲೆಗಳು ಸಮರ್ಪಕವಾಗಿದ್ದರೆ ಡಿಡಿಎಂಎ ( ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ) ಹಣವನ್ನು ಬಿಡುಗಡೆ ಮಾಡಬೇಕು ಎಂದು ತಿಳಿಸಿದೆ.

Join Whatsapp
Exit mobile version