ಸೆಂಟ್ರಲ್ ವಿಸ್ತಾ: ಹೈರ್ಕೋಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ

Prasthutha: June 29, 2021

ಹೊಸದಿಲ್ಲಿ: ಕೋವಿಡ್ ದುರಿತ ಕಾಲದಲ್ಲಿ ಸೆಂಟ್ರಲ್ ವಿಸ್ತಾ ನಿರ್ಮಾಣ ಯೋಜನೆಯನ್ನು ಸ್ಥಗಿತಗೊಳಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿರುವ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.


ಅರ್ಜಿದಾರರು ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ರಾಜಧಾನಿಯಲ್ಲಿ ನಡೆಯುತ್ತಿರುವ ಇತರೆ ಸಾರ್ವತ್ರಿಕ ಯೋಜನೆಗಳ ಕುರಿತು ಅಧ್ಯಯನ ನಡೆಸದೇ, ಕೇವಲ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಮಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಅನಿರುದ್ದ್ ಬೋಸ್ ಅವರನ್ನೊಳಗೊಂಡ ಪೀಠ, ಇಂದು ಈ ಸಂಬಂಧದ ಪಿಐಎಲ್ ವಿಚಾರಣೆ ನಡೆಸಿ, ಈ ಅರ್ಜಿಯಲ್ಲಿ ಸಾರ್ವಜನಿಕ ಹಿತಸಕ್ತಿ ಇಲ್ಲ. ಇದೊಂದು ಪ್ರಚೋದಿತ ಅರ್ಜಿಯಾಗಿದೆ. ಇದರಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆ ಇದೆ ಎಂದು ಹೈಕೋರ್ಟ್ ವ್ಯಕ್ತಪಡಿಸಿರುವ ಅಭಿಪ್ರಾಯ ಒಪ್ಪಬಹುದಾಗಿದೆ ಎಂದು ನ್ಯಾಯ ನ್ಯಾಯಪೀಠ ಹೇಳಿದೆ.


ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಸರಿಸುತ್ತಾ ಈ ಯೋಚನೆ ಅನುಷ್ಠಾನಗೊಳ್ಳುತ್ತಿದೆ ಇದೇ ವೇಳೆ ಪಿಐಎಲ್ ಸಲ್ಲಿಸಿರುವ ಅರ್ಜಿದಾರರಿಗೆ 1 ಲಕ್ಷ ದಂಡವನ್ನುವಿಧಿಸಿರುವ ಹೈಕೋರ್ಟ್ ಆದೇಶದ ವಿರುದ್ಧವೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ