ಲಸಿಕೆ ವಿಚಾರದಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಬೇಡ : ಸುಪ್ರೀಂ ಕೋರ್ಟಿಗೆ ಕೇಂದ್ರ

Prasthutha|

ಹೊಸದಿಲ್ಲಿ :  ಕೋವಿಡ್ ಸೋಂಕಿನಿಂದ ಇಡೀ ದೇಶವೇ ತತ್ತರಿಸಿ ಹೋಗಿದ್ದು, ಸರ್ಕಾರ ಕೊರೋನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಈ ನಡುವೆ ಕೋವಿಡ್ ಲಸಿಕೆಯ ಬೆಲೆಗಳಲ್ಲಿನ ವ್ಯತ್ಯಾಸ, ಲಸಿಕೆ ಕೊರತೆ ಹಾಗೂ ನಿಧಾನಗತಿಯ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಟೀಕಿಸಿದೆ. ಈ ಕುರಿತು ಸರ್ಕಾರವು ಕೋವಿಡ್ ವ್ಯಾಕ್ಸಿನೇಷನ್ ನೀತಿಯನ್ನು ಬಲವಾಗಿ ಸಮರ್ಥಿಸಿಕೊಂಡು ಭಾನುವಾರ(ಮೇ 09) ತಡರಾತ್ರಿ ಸುಪ್ರೀಂಕೋರ್ಟ್ ಗೆ ಅಫಿಡವಿತ್ ಸಲ್ಲಿಸಿ ಕೋವಿಡ್ ಲಸಿಕೆ ನೀತಿಯ ವಿಚಾರದಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಬೇಡ ಎಂದು ಹೇಳಿರುವುದಾಗಿ ವರದಿಯಾಗಿದೆ.

- Advertisement -

ಕೇಂದ್ರದ ವಿಚಾರದಲ್ಲಿ ನ್ಯಾಯಾಂಗದ ಸಲಹೆ ಉತ್ತಮವಾಗಿದ್ದರೂ ಕೂಡಾ ಹಸ್ತಕ್ಷೇಪದಿಂದ ಅನಿರೀಕ್ಷಿತ ಮತ್ತು ಅನಪೇಕ್ಷಿತ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದ ಸರಕಾರ ಜಾಗತಿಕವಾಗಿ ಹರಡುತ್ತಿರುವ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಕೀಯ ತಜ್ಞರು ಮತ್ತು ವಿಜ್ಞಾನಿಗಳ ಸಲಹೆ ಮೇರೆಗೆ ದೇಶದಲ್ಲಿ ಲಸಿಕೆ ವಿತರಣೆ ಮತ್ತು ಬೆಲೆಯನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಹೆಚ್ಚಿನ ಅವಕಾಶ ಇಲ್ಲ ಎಂದು ಪ್ರತಿಪಾದಿಸಿದೆ.

Join Whatsapp