ಕೇಂದ್ರದಿಂದ ರಾಜ್ಯ ಹೈಕೋರ್ಟ್‌ಗೆ ಐವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

Prasthutha|

- Advertisement -

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಹೈಕೋರ್ಟ್‌ಗೆ ಹೆಚ್ಚುವರಿಯಾಗಿ ಐವರು ನ್ಯಾಯಮೂರ್ತಿಗಳನ್ನ ನೇಮಕ ಮಾಡಿ ಇಂದು(ಶುಕ್ರವಾರ) ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಟಿ ಜಿ ಶಿವಶಂಕರೇಗೌಡ ಮತ್ತು ಹಾಲಿ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶರಾಗಿರುವ ಚಂದ್ರಶೇಖರ ಮೃತ್ಯುಂಜಯ ಜೋಶಿ ಹಾಗೂ ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಅನಿಲ್‌ ಭೀಮಸೇನ ಕಟ್ಟಿ ಸೇರಿದಂತೆ ಐವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

- Advertisement -

ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಗುರುಸಿದ್ದಯ್ಯ ಬಸವರಾಜ ಮತ್ತು ರಾಜ್ಯ ಕೈಗಾರಿಕಾ ನ್ಯಾಯ ಮಂಡಳಿಯ ಮೇಲುಸ್ತುವಾರಿ ಅಧಿಕಾರಿ ಹಾಗೂ ಹಿಂದಿನ ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿದ್ದ ಉಮೇಶ್‌ ಮಂಜುನಾಥ್‌ ಭಟ್‌ ಅಡಿಗ ಅವರನ್ನೂ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ.



Join Whatsapp