ಸುಪ್ರೀಂಕೋರ್ಟ್ ಗಡುವು ಬೆನ್ನಲ್ಲೇ ಐವರು ನ್ಯಾಯಾಧೀಶರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ

Prasthutha|

ನವದೆಹಲಿ: ಕೊಲಿಜಿಯಂ ಶಿಫಾರಸುಗಳ ಜಾರಿಗೆ ಸುಪ್ರೀಂಕೋರ್ಟ್ 10 ದಿನಗಳ ಗಡುವು ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ, ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಿಸುವ ಮೂಲಕ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದೆ.

- Advertisement -

ಈ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ಶಾಸಕಾಂಗ-ನ್ಯಾಯಾಂಗ ಬಿಕ್ಕಟ್ಟು ಅಲ್ಪ ಮಟ್ಟಿಗೆ ಪರಿಹಾರವಾದಂತಾಗಿದೆ.

ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಂಕಜ್‌ ಮಿತ್ತಲ್‌, ಪಾಟ್ನ ಮುಖ್ಯ ನ್ಯಾಯಮೂರ್ತಿ ಸಂಜಯ್‌ ಕರೋಲ್‌, ಮಣಿಪುರ್‌ ಹೈಕೋರ್ಟ್‌ ಚೀಫ್‌ ಜಸ್ಟಿಸ್‌ ಪಿ.ವಿ.ಸಂಜಯ್‌ ಕುಮಾರ್‌, ಪಾಟ್ನ ಹೈಕೋರ್ಟ್‌ ನ್ಯಾಯಮೂರ್ತಿ ಅಹ್ಸಾನುದ್ದೀನ್‌ ಅಮಾನುಲ್ಲಾ ಹಾಗೂ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಮನೋಜ್‌ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Join Whatsapp