Home Uncategorized ಕರ್ನಾಟಕಕ್ಕೆ ಬರ ಪರಿಹಾರ ನಿರ್ಲಕ್ಷ್ಯ; 2 ವಾರದಲ್ಲಿ ಸಮಸ್ಯೆ ಇತ್ಯರ್ಥ: ಸುಪ್ರೀಂಗೆ ಕೇಂದ್ರ ಭರವಸೆ

ಕರ್ನಾಟಕಕ್ಕೆ ಬರ ಪರಿಹಾರ ನಿರ್ಲಕ್ಷ್ಯ; 2 ವಾರದಲ್ಲಿ ಸಮಸ್ಯೆ ಇತ್ಯರ್ಥ: ಸುಪ್ರೀಂಗೆ ಕೇಂದ್ರ ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.


ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್ ಜಿ ಮೆಹ್ತಾ ಕೋರ್ಟ್ ತಿಳಿಸಿದರು.

ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್​ ವಾದ: ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.

Join Whatsapp
Exit mobile version