ಎಂಟು ಯೂಟ್ಯೂಬ್ ಚಾನಲ್ ಗಳನ್ನು ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ

Prasthutha|

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗುರುವಾರ ಪಾಕಿಸ್ತಾನ ಮೂಲದ ಒಂದು, ಭಾರತದ ಎಂಟು ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸಿದೆ.

- Advertisement -

ಐಟಿ ನಿಯಮಗಳು, 2021 ರ ಅಡಿಯಲ್ಲಿ ಸಚಿವಾಲಯವು ಏಳು ಭಾರತೀಯ ಮತ್ತು ಪಾಕಿಸ್ತಾನ ಮೂಲದ ಯೂಟ್ಯೂಬ್ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸಿದೆ. ನಿರ್ಬಂಧಿತ ಚಾನೆಲ್ ಗಳು 114 ಕೋಟಿ ವೀಕ್ಷಣೆಗಳನ್ನು ಮತ್ತು 85,73,000 ಚಂದಾದಾರರನ್ನು ಹೊಂದಿವೆ.

ಯೂಟ್ಯೂಬ್ ನಲ್ಲಿ ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ಸಚಿವಾಲಯ ಆರೋಪಿಸಿದೆ.

- Advertisement -

ಇದಕ್ಕೂ ಮೊದಲು ಏಪ್ರಿಲ್ 25 ರಂದು, ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ 10 ಭಾರತೀಯ ಮತ್ತು 6 ಪಾಕಿಸ್ತಾನ ಮೂಲದ ಚಾನೆಲ್ ಗಳು ಸೇರಿದಂತೆ 16 ಯೂಟ್ಯೂಬ್ ಸುದ್ದಿ ವಾಹಿನಿಗಳನ್ನು ನಿರ್ಬಂಧಿಸಿತ್ತು.

Join Whatsapp