Home ಟಾಪ್ ಸುದ್ದಿಗಳು ಸೋನಿಯಾ ಗಾಂಧಿ ಅಧ್ಯಕ್ಷತೆಯ 2 ಎನ್ ಜಿಒಗಳ ವಿದೇಶಿ ಕೊಡುಗೆ ಪರವಾನಗಿ ರದ್ದುಗೊಳಿಸಿದ ಕೇಂದ್ರ

ಸೋನಿಯಾ ಗಾಂಧಿ ಅಧ್ಯಕ್ಷತೆಯ 2 ಎನ್ ಜಿಒಗಳ ವಿದೇಶಿ ಕೊಡುಗೆ ಪರವಾನಗಿ ರದ್ದುಗೊಳಿಸಿದ ಕೇಂದ್ರ

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಧ್ಯಕ್ಷತೆಯ ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್ ಎಂಬ ಎರಡು ಎನ್ ಜಿಒಗಳ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಪರವಾನಗೆಗಳನ್ನು ಕೇಂದ್ರ ಗೃಹ ಸಚಿವಾಲಯ ರದ್ದುಗೊಳಿಸಿದೆ.


ತನಿಖಾಧಿಕಾರಿಗಳು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ದಾಖಲೆಗಳ ದುರ್ಬಳಕೆ, ಹಣದ ದುರುಪಯೋಗ ಮತ್ತು ಚೀನಾ ಸೇರಿದಂತೆ ವಿದೇಶಗಳಿಂದ ಹಣವನ್ನು ಸ್ವೀಕರಿಸುವಾಗ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಆರ್ ಜಿಎಫ್ ಮತ್ತು ಆರ್ ಜಿಸಿಟಿಯಲ್ಲಿ ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Join Whatsapp
Exit mobile version