ಹೈದರಾಬಾದ್: ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಎಐಎಂಐಎಂ ಅಧ್ಯಕ್ಷ ಅಸದುದ್ದೀನ್ ಉವೈಸಿ ಒತ್ತಾಯಿಸಿದ್ದಾರೆ.
ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಉನ್ನತ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಅತ್ಯಾಚಾರಿಗಳಿಗೆ ಈ ತೀರ್ಪು ಭವಿಷ್ಯದಲ್ಲಿ ಎಚ್ಚರಿಕೆಯ ಗಂಟೆಯಾಗಲಿದೆ’ ಎಂದರು.
ಯಾರೊಬ್ಬರು ತಾವು ನಂಬಿರುವ ರಾಜಕೀಯ ಸಿದ್ದಾಂತದಿಂದಾಗಿ ಕಾನೂನಿನಿಂದ ಮುಕ್ತರಲ್ಲ ಎಂಬುವುದನ್ನು ಅತ್ಯಾಚಾರಿಗಳು ಅರ್ಥಮಾಡಿಕೊಳ್ಳುವುದು ಸೂಕ್ತ ಎಂದು ಹೇಳಿದರು.
ಕೇಂದ್ರ ಹಾಗೂ ಗುಜರಾತ್ನಲ್ಲಿರುವ ಬಿಜೆಪಿ ಸರ್ಕಾರಗಳ ಸಹಕಾರದಿಂದ ಅಪರಾಧಿಗಳು ಬಿಡುಗಡೆಗೊಂಡಿದ್ದರು. ಆದ್ದರಿಂದ ಕೇಂದ್ರ ಮತ್ತು ಗುಜರಾತ್ ಸರ್ಕಾರ ಬಿಲ್ಕಿಸ್ ಬಾನು ಅವರಲ್ಲಿ ಕ್ಷಮೆ ಕೇಳಬೇಕಿದೆ ಎಂದು ಒತ್ತಾಯಿಸಿದ್ದಾರೆ.