ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು: ಮಾರ್ಗಸೂಚಿ ಬಿಡುಗಡೆ

- Advertisement -

ನವದೆಹಲಿ: ರಾಜ್ಯ ಸರ್ಕಾರ ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.

- Advertisement -

ಕಳೆದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

- Advertisement -

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದು

- Advertisement -


Must Read

Related Articles