Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್

ಕರ್ನಾಟಕದಲ್ಲಿ ಬರ ಇದ್ದರೂ ಸಹಾಯಹಸ್ತ ಚಾಚದ ಕೇಂದ್ರ ಸರ್ಕಾರ: ಜೈರಾಮ್ ರಮೇಶ್

ನವದೆಹಲಿ: ಕರ್ನಾಟಕದ ಹೆಚ್ಚಿನ ಪ್ರದೇಶದಲ್ಲಿ ನೀರಿನ ಅಭಾವ ಎದುರಾಗಿದೆ, ತೀವ್ರ ಬರ ಪರಿಸ್ಥಿತಿ ಇದೆ. ಆದರೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರಿಗೆ ಸಹಾಯ ಮಾಡಲು ನಿರಾಕರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಜೈರಾಮ್ ರಮೇಶ್ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ತೀವ್ರ ನೀರಿನ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ರಾಜ್ಯ ಸರ್ಕಾರವು ಬರ ಪರಿಹಾರಕ್ಕಾಗಿ ₹18,172 ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಮೋದಿ ಸರ್ಕಾರಕ್ಕೆ ಮನವಿ ಮಾಡಿದೆ. ಮೋದಿ ಸರ್ಕಾರ ಕರ್ನಾಟಕದ ಜನರಿಗೆ ಸಹಾಯ ಮಾಡಲು ಏಕೆ ನಿರಾಕರಿಸಿದೆ’ ಎಂದು ಪ್ರಶ್ನಿಸಿದ್ದಾರೆ.

Join Whatsapp
Exit mobile version