ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಡದಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.
ಮೇ 4ರಂದು ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಸಾಮಾಜಿಕ ಮಾಧ್ಯಮಗಳು ಭಾರತೀಯ ಕಾನೂನಿಗೆ ಬದ್ಧವಾಗಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.