Home ಟಾಪ್ ಸುದ್ದಿಗಳು ಪುನೀತ್ ರಾಜ್‌ಕುಮಾರ್ ಗೆ ಪದ್ಮ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು: ಮುಖ್ಯಮಂತ್ರಿ ಬೊಮ್ಮಾಯಿ

ಪುನೀತ್ ರಾಜ್‌ಕುಮಾರ್ ಗೆ ಪದ್ಮ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು; ಇತ್ತೀಚೆಗೆ ಅಗಲಿದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ವಿಧಾನಸಭೆಯಲ್ಲಿ ಇಂದು ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಅವರು, ರಾಜ್ಯ ಸರ್ಕಾರ ನಟನಿಗೆ ಈಗಾಗಲೇ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಸದ್ಯದಲ್ಲೇ ಪ್ರಶಸ್ತಿ ವಿತರಣಾ ದಿನಾಂಕ ಪ್ರಕಟಿಸಲಾಗುವುದು ಎಂದರು.


ಇದಕ್ಕೂ ಮುನ್ನ ವಿಧಾನಸಭೆ ಕಾರ್ಯ ಕಲಾಪಗಳು ಸಂತಾಪ ನಿರ್ಣಯದೊಂದಿಗೆ ಆರಂಭವಾಯಿತು.
ಸದನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಇತ್ತೀಚೆಗೆ ಅಗಲಿದ ರಾಜ್ಯದ ರಾಜ್ಯಪಾಲರಾಗಿದ್ದ ಕೆ.ರೋಸಯ್ಯ, ಮಾಜಿ ಸಚಿವರಾದ ಎಸ್.ಆರ್.ಮೋರೆ, ವಿರೂಪಾಕ್ಷಪ್ಪ ಅಗಡಿ, ವಿಧಾನಸಭೆಯ ಮಾಜಿ ಸದಸ್ಯ ಕೆ.ರಾಮ್ ಭಟ್ ಹಾಗೂ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮೊದಲಾದ ಗಣ್ಯರಿಗೆ ಸಂತಾಪ ಸೂಚಿಸುವ ನಿರ್ಣಯ ಮಂಡಿಸಿದರು.
ನಂತರ ನಿರ್ಣಯದ ಮೇಲೆ ಮಾತನಾಡಿದ ಸಭಾನಾಯಕ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲಾದ ಸದಸ್ಯರು ಮೃತರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.
ವಿಧಾನ ಪರಿಷತ್‌ನಲ್ಲೂ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.


ನಂತರ ಎರಡೂ ಸದನಗಳಲ್ಲಿ ಅಗಲಿದ ಸದಸ್ಯರ ಗೌರವಾರ್ಥ ಒಂದು ನಿಮಿಷ ಮೌನ ಆಚರಿಸಲಾಯಿತು.

Join Whatsapp
Exit mobile version