ನವದೆಹಲಿ: ಐತಿಹಾಸಿಕ ಹೆಸರನ್ನು ಬದಲಾಯಿಸುವ ಚಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಶನಿವಾರ ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಹೆಸರನ್ನು ‘ಅಮೃತ್ ಉದ್ಯಾನ್” ಎಂದು ಬದಲಾಯಿಸಿದೆ.
ಸ್ವಾತಂತ್ರ್ಯದ 75 ವರ್ಷಗಳನ್ನು ಆಜಾದೀ ಕಾ ಅಮೃತ್ ಮಹೋತ್ಸವ ಎಂದು ಆಚರಿಸುವ ಸಂದರ್ಭದಲ್ಲಿ ಭಾರತದ ರಾಷ್ಟ್ರಪತಿಯವರು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ ಅಮೃತ್ ಉದ್ಯಾನ ಎಂಬ ಸಾಮಾನ್ಯ ಹೆಸರನ್ನು ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಉಪ ಕಾರ್ಯದರ್ಶಿ ನವಿಕಾ ಗುಪ್ತಾ ಮಾಹಿತಿ ನೀಡಿದ್ದಾರೆ.
ನಾಳೆ ಉದ್ಯಾನವನ ಉದ್ಘಾಟನೆಗೊಳ್ಳಲಿದೆ.