ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ: ಸಿದ್ದರಾಮಯ್ಯ

Prasthutha|

ಕೊಪ್ಪಳ: ರಾಮಮಂದಿರ ಉದ್ಘಾಟನೆಗೆ ರಾಜ್ಯ ಸರ್ಕಾರ ರಜೆ ಘೋಷಣೆಗೆ ಬಿಜೆಪಿ ಒತ್ತಾಯದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.

- Advertisement -

ಕೊಪ್ಪಳ ತಾಲೂಕಿನ ಬಸಾಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ಯಾರಿಗೆಲ್ಲ ಆಹ್ವಾನ ಬಂದಿದೆ ಗೊತ್ತಿಲ್ಲ. ಆಹ್ವಾನ ಬಂದವರು ಹೋಗಲಿ ಎಂದರು. ಇದೇ ವೇಳೇ ಬರಪರಿಹಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬರದ ಹಿನ್ನೆಲೆ ತಾತ್ಕಾಲಿಕವಾಗಿ 2 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಇನ್ನೂ ಬರ ಪರಿಹಾರ ತಲುಪಿಲ್ಲ. ಕೂಡಲೇ 2 ಸಾವಿರ ರೂ. ಪರಿಹಾರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು

Join Whatsapp