ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರದವರು ಮಧ್ಯಸ್ಥಿಕೆ ವಹಿಸಲಿ ಅಂತ ಒತ್ತಾಯಿಸಿದ್ದಾರೆ.
ಇದೇ ವೇಳೆ ನೀತಿ ಆಯೋಗದ ಸಭೆಗೆ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಉದ್ದೇಶ ಪೂರ್ವಕವಾಗಿ ನೀತಿ ಆಯೋಗದ ಸಭೆಗೆ ಬಾಯ್ಕಾಟ್ ಮಾಡಿದ್ದೇನೆ. ನಾನು ಮಾತ್ರ ಅಲ್ಲ, ಬಿಜೆಪಿಯೇತರ ಸರ್ಕಾರದ ರಾಜ್ಯಗಳು ಬಾಯ್ಕಾಟ್ ಮಾಡಿದ್ದಾರೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಸಭೆಗೆ ಹೋಗಿ ಏನು ಪ್ರಯೋಜನ? ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ. ಪ್ರತಿ ಬಾರಿಯೂ ನಿರ್ಮಾಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ. ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕರ್ನಾಟಕದ ಋಣ ತೀರಿಸಿಬಾರದಾ? ಎಂದು ಪ್ರಶ್ನೆ ಮಾಡಿದರು.