Home ಟಾಪ್ ಸುದ್ದಿಗಳು ಜಿ-20 ಶೃಂಗಸಭೆ ಹಿನ್ನೆಲೆ| ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಜಿ-20 ಶೃಂಗಸಭೆ ಹಿನ್ನೆಲೆ| ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ಹೊಸದಿಲ್ಲಿ : 2023ರ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಆತಿಥ್ಯವನ್ನು ಭಾರತವು ವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯತಂತ್ರಗಳ ಚರ್ಚೆ ಹಾಗೂ ‍ಪೂರಕವಾಗಿ ಸಲಹೆಗಳನ್ನು ಪಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.

ಸರ್ವಪಕ್ಷಗಳ ಸಭೆಯು ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ. 40 ಪಕ್ಷಗಳ ಅಧ್ಯಕ್ಷರಿಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಆಹ್ವಾನ ನೀಡಿದ್ದಾರೆ.

ಜಿ20 ಶೃಂಗಸಭೆ 2023ರ ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ನಡೆಯಲಿದೆ.

ಜಿ20 ಭಾರತ ಸೇರಿ ವಿಶ್ವದ ಪ್ರಮುಖ ದೇಶಗಳು ಸದಸ್ಯರಾಗಿರುವ ಅಂತರರಾಷ್ಟ್ರೀಯ ವೇದಿಕೆಯಾಗಿದೆ.

Join Whatsapp
Exit mobile version