ನವದೆಹಲಿ: ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಭಾರತದಲ್ಲಿ ಈಗ 101ಕ್ಕೆ ಏರಿಕೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಈಗಾಗಲೇ ಜಗತ್ತಿನಾದ್ಯಂತ ಒಮಿಕ್ರಾನ್ ಕ್ಷಿಪ್ರವಾಗಿ ಹರಡುವ ಮೂಲಕ ಕೋವಿಡ್-19 ಸೋಂಕು ಪ್ರಕರಣ ಹೆಚ್ಚಳವಾಗತೊಡಗಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ದೇಶದಲ್ಲಿ 19 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಸಮರ್ಪಕವಾಗಿ ಪಾಲಿಸಬೇಕಾದ ಅಗತ್ಯವಿದೆ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಅನಾವಶ್ಯಕ ತಿರುಗಾಟಕ್ಕೆ ಕಡಿವಾಣ, ಗುಂಪು ಸೇರಿದ ಸ್ಥಳದಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ಸಲಹೆ ನೀಡಿದೆ.