ಬೆಂಗಳೂರು: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ವರದಿ ಸಲ್ಲಿಸಲು ಕೇಂದ್ರ ರಾಜ್ಯಕ್ಕೆ ನೀಡಿದ ಆದೇಶ ಪತ್ರದಲ್ಲಿ ಆದೇಶದ ದಿನಾಂಕವನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ ಎಂದು ಭಾರಿ ಹಾಗೂ ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು ಬೂತ್ ವಿಜಯ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆದೇಶ ಪತ್ರದಲ್ಲಿ ಸಂಬಂಧಿಸಿದ ನೀರಾವರಿ ಇಲಾಖೆಯ ಅಧಿಕಾರಿಯ ಸಹಿ ಹಾಗೂ ದಿನಾಂಕ ನಮೂದಿಸಲಾಗಿದೆ. ದಿನಾಂಕ ಇಲ್ಲವೆಂದು ಆರೋಪಿಸಿರುವ ಕಾಂಗ್ರೆಸ್ ನ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರು ಮತ್ತೊಮ್ಮೆ ಪರಿಶೀಲಿಸುವಂತೆ ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ 5 ಸಾವಿರದ ಏಳನೂರು ಕೋಟಿ ಅನುದಾನ ನಿಗದಿಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹತ್ವದ ಐದು ಏತ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ರಾಜ್ಯದ 5 ಲಕ್ಷ 38 ಸಾವಿರ ರೈತರಿಗೆ 107 ಕೋಟಿ ರೂಪಾಯಿ ಹಣ ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.