ಬೆಂಗಳೂರು: ಎಂಜಿನಿಯರಿಂಗ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಲಾಗುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಶುಕ್ರವಾರ ಪ್ರಕಟಗೊಂಡಿದ್ದು, ಮೇ 20 ಮತ್ತು 22ರ ವರೆಗೆ ನಡೆಯಲಿವೆ.
ಮಾರ್ಚ್ 1ರಿಂದ ಈ ಸಂಬಂಧದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. 20 ಮತ್ತು 21ರಂದು ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಆಯುಷ್, ಯೋಗ, ಯುನಾನಿ ಮತ್ತಿತರ ಕೋರ್ಸ್‌ಗಳ ಪ್ರವೇಶಕ್ಕೆ ಪರೀಕ್ಷೆ ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮಾ. 22ರಂದು ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.