ನಿಗದಿಯಂತೆ ಸಿಇಟಿ ಪರೀಕ್ಷೆ: ಡಾ.ಸಿ.ಎನ್.ಅಶ್ವತ್ಥನಾರಾಯಣ

Prasthutha|

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿರುವ ಕಾರಣ ವೈದ್ಯಕೀಯ, ಎಂಜಿನಿಯರಿಂಗ್ ಪ್ರವೇಶಾತಿಗಾಗಿ ಸಿಇಟಿ ಪರೀಕ್ಷೆ ನಡೆಸಲೇಬೇಕಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.


ಈ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಈ ಮೊದಲು ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಸೀಟ್ ಹಂಚಿಕೆ ಆಯ್ಕೆ ಮಾಡಲು ಕನಿಷ್ಠ ಅಂಕ ನಿಗದಿ ಮಾಡಲಾಗಿತ್ತು. ಆದರೆ ಈ ಬಾರಿ ಕನಿಷ್ಠ ಅಂಕ ನಿಗದಿಯಿಂದ ಸಮಸ್ಯೆಯಾಗುವುದು ಬೇಡ. ಸಿಇಟಿ ಅಂಕ ಮಾತ್ರ ಪರಿಗಣನೆ ಆಗಲಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

- Advertisement -

- Advertisement -