ಕ್ಯಾಂಪಸ್ ಫ್ರಂಟ್ ನಿಯೋಗದಿಂದ ಸಿದ್ದರಾಮಯ್ಯ ಭೇಟಿ: ಎನ್ ಇಪಿ ಬಗ್ಗೆ ಸದನದಲ್ಲಿ ಚರ್ಚಿಸಲು ಮನವಿ

Prasthutha|

ಬೆಂಗಳೂರು: ಕ್ಯಾಂಪಸ್ ಫ್ರೆಂಟ್ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ನೇತೃತ್ವದ ನಿಯೋಗವು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಧಾನ ಸಭಾ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಲೋಪದೋಷಗಳ ಕರಡು ಪ್ರತಿಯನ್ನು ನೀಡಿ ಚರ್ಚಿಸುವಂತೆ ಮನವಿ ಮಾಡಲಾಯಿತು.

- Advertisement -


ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಸ್ವದಕತ್ ಶಾ, ರಾಜ್ಯ ಕಾರ್ಯದರ್ಶಿ ಸೈಯದ್ ಸರ್ಫರಾಜ್ ಉಪಸ್ಥಿತರಿದ್ದರು.
ಇತ್ತೀಚೆಗಷ್ಟೇ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಎನ್ ಇಪಿ ಪ್ರತಿಗಳನ್ನು ಹರಿದು ಹಾಕಿದ್ದರು. ಈ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಪರಿಣಾಮ 15ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದರು. ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಸಿದ್ದರಾಮಯ್ಯ ಕೂಡ ಖಂಡಿಸಿದ್ದರು.

Join Whatsapp