ಬೆಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ವತಿಯಿಂದ ಪ್ರಗತಿ ಪರರು ಚಿಂತಕರು ಹಾಗು ಹೋರಾಟಗಾರರಾದ ನ್ಯಾ. ದ್ವಾರಕನಾಥ್ ರವರನ್ನು ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಪುಂಜಾಲಕಟ್ಟೆ ರವರ ನೇತೃತ್ವದ ನಿಯೋಗವು ಭೇಟಿಯಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಚರ್ಚೆ ನಡೆಸಿ, ರಾಜ್ಯದಲ್ಲಿ ಬಿಜೆಪಿ ಸರಕಾರ ಜಾರಿಗೊಳಿಸಲು ಹೊರಟಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಪ್ರಜಾಪ್ರಭುತ್ವ ವಿರೋಧಿ ಅಂಶಗಳ ಸಂಗ್ರಹಣೆಯ ಕರಡು ಪ್ರತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿಗಳಾದ ಅಲ್ತಾಫ್ ಹೊಸಪೇಟೆ, ಸರ್ಫರಾಝ್ ಗಂಗಾವತಿ, ರಾಜ್ಯ ಸಮಿತಿ ಸದಸ್ಯರಾದ ಜುಬೇರ್ ಬೆಂಗಳೂರು, ಜಿಲ್ಲಾಧ್ಯಕ್ಷರಾದ ಮೊಹಮ್ಮದ್ ಆಕಿಬ್ ಮತ್ತು ರಾಮನಗರ ಜಿಲ್ಲಾಧ್ಯಕ್ಷರಾದ ಮುಯೀನ್ ಉಪಸ್ಥಿತರಿದ್ದರು.