ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ CFI ಪ್ರತಿಭಟನೆ

Prasthutha|

ಬೆಂಗಳೂರು : ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಡೆಸಿದೆ.

ಉಡುಪಿ, ರಾಮನಗರ ಜಿಲ್ಲೆ, ಪುತ್ತೂರು ಸೇರಿದಂತೆ ರಾಜ್ಯದ 100ಕಡೆಗಳಲ್ಲಿ CFI ಪ್ರತಿಭಟನೆ ನಡೆಸಿದ್ದು, ಕೆಲವು ದಿನಗಳ ಹಿಂದೆ ಉಪಮುಖ್ಯಮಂತ್ರಿಗಳು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದೆಂದು ಹೇಳಿಕೆ ನೀಡಿದ್ದು, ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಫ್ಯಾಸಿಸ್ಟ್ ಅಜೆಂಡಾದ ಒಂದು ಭಾಗವಾದ ಶಿಕ್ಷಣದ ಕೇಸರೀಕರಣದ ಭಾಗವಾಗಿದೆ ಇದನ್ನು ರಾಜ್ಯದಲ್ಲಿ ಅನುಷ್ಟಾನ ಗೊಳಿಸಲು ವಿದ್ಯಾರ್ಥಿ ಸಮುದಾಯ ಬಿಡುವುದಿಲ್ಲವೆಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

- Advertisement -