ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ | CFI ಮುಖಂಡರು ಪೊಲೀಸ್ ವಶಕ್ಕೆ

Prasthutha|

ಮಂಗಳೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ರ ಅನ್ಯಾಯದ ಬಂಧನ ಮತ್ತು ಸಂಘಟನೆಯ ಮುಖಂಡರ ವಿರುದ್ಧ ಜಾರಿ ನಿರ್ದೇಶನಾಲಯ(ಈಡಿ)ದ ದುರ್ಬಳಕೆ ವಿರೋಧಿಸಿ ಇಂದು ನಗರದಲ್ಲಿ ಸಿಎಫ್ಐ ಕಾರ್ಯಕರ್ತರಿಂದ ಭಾರೀ ಆಕ್ರೋಶದ ಪ್ರತಿಭಟನೆ ನಡೆಯಿತು. ಪ್ರತಿಭಟನಕಾರರು ರವೂಫ್ ಶರೀಫ್ ರ ಬಿಡುಗಡೆಗೆ ಈ ವೇಳೆ ಒತ್ತಾಯಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ ಸಂಘಟನೆ ವತಿಯಿಂದ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು.

- Advertisement -

ಕ್ಯಾಂಪಸ್ ಫ್ರಂಟ್ ರಾಜ್ಯ ನಾಯಕರಾದ ಇಮ್ರಾನ್ ಪಿ.ಜೆ., ಮುಹಮ್ಮದ್ ಸಾದಿಕ್ ಸೇರಿದಂತೆ ಹಲವನ್ನು ಪೊಲೀಸರು ಈ ವೇಳೆ ವಶಕ್ಕೆ ಪಡೆದಿದ್ದಾರೆ ಮತ್ತು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -