ವಿದ್ಯಾರ್ಥಿ ವೇತನ ಪರಿಶೀಲನೆಯಲ್ಲಿ ನಿರ್ಲಕ್ಷ್ಯ: ಪ್ರಾಂಶುಪಾಲರ ವಿರುದ್ಧ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ

Prasthutha: July 15, 2021

ಉಪ್ಪಿನಂಗಡಿ: ಇಲ್ಲಿನ ಡಿಗ್ರಿ ಕಾಲೇಜಿನಲ್ಲಿ ಎನ್ ಎಸ್ ಪಿ ಸ್ಕಾಲರ್ ಶಿಪ್ ಪರಿಶೀಲನೆಯಲ್ಲಿ ಕಾಲೇಜು ತೋರಿದ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಕಳೆದುಕೊಂಡಿದ್ದು, ಪ್ರಾಂಶುಪಾಲರ ಬೇಜವಾಬ್ದಾರಿ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲೇಜಿನಲ್ಲಿ 180 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಎನ್ ಎಸ್ ಪಿ ಸ್ಕಾಲರ್ ಶಿಪ್ ಹಾಕಿದ್ದು, ಯಾವುದೇ ಅರ್ಜಿ ಕಾಲೇಜಿನಲ್ಲಿ ಪರಿಶೀಲನೆ ಆಗದೇ ಇರುವುದರಿಂದ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಕಳೆದುಕೊಂಡಿದ್ದಾರೆ. ಇದು ಕಾಲೇಜಿನ ಬೇಜವಾಬ್ದಾರಿಯಿಂದ ನಡೆದ ಘಟನೆಯಾಗಿದ್ದು, ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ವಿದ್ಯಾರ್ಥಿಗಳು, ಕ್ಯಾಂಪಸ್ ಫ್ರಂಟ್ ನಾಯಕರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡ ರಿಯಾಝ್ ಪುತ್ತೂರು, ಉಪ್ಪಿನಂಗಡಿ ಜಿಲ್ಲಾಧ್ಯಕ್ಷ ರಿಝ್ವಾನ್, ಕಾರ್ಯದರ್ಶಿ ಮರ್ಝುಕ್, ವಿಟ್ಲ ಜಿಲ್ಲಾಧ್ಯಕ್ಷ ಫಯಾಲ್, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ