ವಿದ್ಯಾರ್ಥಿ ನಾಯಕರನ್ನು 250 ದಿನಗಳ ಕಾಲ ಅನ್ಯಾಯವಾಗಿ ಜೈಲಿನಲ್ಲಿ ಬಂಧಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದ್ದ ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಉತ್ತರಪ್ರದೇಶದಲ್ಲಿ ಹತ್ರಾಸ್ ಎಂಬಲ್ಲಿ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು, ಬಾಲಕಿಯ ಮನೆಗೆ ಭೇಟಿ ನೀಡಲು ತೆರಳಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ನಾಯಕರಾದ ಆತಿಕುರ್ರಹ್ಮಾನ್, ಮಸೂದ್ ಹಾಗೂ ಪತ್ರಕರ್ತ ಸಿದ್ದೀಕ್ ಕಪ್ಪನ್ , ಆಲಂ ಅದೇ ರೀತಿ ಇದೇ ಪ್ರಕರಣವನ್ನು ನೆಪವಾಗಿರಿಸಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ಅವರನ್ನು ಅನ್ಯಾಯವಾಗಿ ಬಂಧಿಸಿ ಇಂದಿಗೆ 250 ದಿನಗಳಾಗಿದ್ದು, ಇದನ್ನು ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ರಾಮನಗರ, ಉಡುಪಿ, ಬಳ್ಳಾರಿ, ಕುಂದಾಪುರ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಪ್ಲೇಕಾರ್ಡ್ ಪ್ರದರ್ಶಿಸಿ ಅಮಾಯಕರ ಬಿಡುಗಡೆಗೆ ಆಗ್ರಹಿಸಿದರು.