ಮಂಗಳೂರಿನಲ್ಲಿ ವಿದ್ಯಾರ್ಥಿಯ ಕೊಲೆ ಪ್ರಕರಣ; ಸಮಗ್ರ ತನಿಖೆಗೆ ಕ್ಯಾಂಪಸ್ ಫ್ರಂಟ್ ಒತ್ತಾಯ

Prasthutha|

ಉಳ್ಳಾಲ :  ಕೆಸಿ ರೋಡಿನಲ್ಲಿ ನಡೆದ 12 ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಇನಾಯತ್ ಅಲಿ ಒತ್ತಾಯಿಸಿದ್ದಾರೆ. ಕೆಸಿ ರೋಡ್ ನಿವಾಸಿ ಹನೀಫ್ ಎಂಬುವವರ ಪುತ್ರ ಹಾಕಿಫ್ ಎಂಬಾತ  ಎಪ್ರಿಲ್ ಮುರರ ರಾತ್ರಿಯಿಂದ ಕಾಣೆಯಾಗಿದ್ದುಮರುದಿನ ಬೆಳಗ್ಗೆ ಆತನ ಮೃತದೇಹ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಘಟನೆಯು ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ ಹಾಗೂ ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ.

- Advertisement -

ಪ್ರಕರಣದ ಸಂಬಂಧ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪ್ರಾಥಮಿಕ ತನಿಖೆಯಿಂದ ಆನ್‍ಲೈನ್ ಗೇಮ್ ವಿಚಾರವಾಗಿ ನಡೆದ ತರ್ಕ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಘಟನೆಯಲ್ಲಿ ಆರೋಪಿ ಜೊತೆ ಬೇರೆ ಯಾರದರೂ ಶಾಮಿಲಾಗಿದ್ದಾರೆಯೇ ಎಂಬ ಸಂಶಯ ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ. ಹೀಗಿರುವಾಗ ಪೊಲೀಸ್ ಇಲಾಖೆ ಈ ಪ್ರಕರಣದ ಬಗ್ಗೆ ವಿವಿಧ ಆಯಮಗಳಿಂದ ಸಮಗ್ರವಾದ  ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿ, ಸಾರ್ವಜನಿಕರ ಸಂಶಯಗಳಿಗೆ ತೆರೆ ಎಳೆದು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಮುಂದಾಗಬೇಕೆಂದು ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಇನಾಯತ್ ಅಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Join Whatsapp