Home ಟಾಪ್ ಸುದ್ದಿಗಳು ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೋಲಿಸ್ ದೌರ್ಜನ್ಯ: ಕ್ಯಾಂಪಸ್ ಫ್ರಂಟ್ ನಿಯೋಗ...

ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಪೋಲಿಸ್ ದೌರ್ಜನ್ಯ: ಕ್ಯಾಂಪಸ್ ಫ್ರಂಟ್ ನಿಯೋಗ ಭೇಟಿ

>ಹೋರಾಟ ತೀವ್ರಗೊಳಿಸುವ ಎಚ್ಚರಿಕೆ

ಕೊಪ್ಪಳ: ಬೊಮ್ಮಾಯಿ ಸರಕಾರದ ದುರಾಡಳಿತದ ವಿರುದ್ಧ ಕೊಪ್ಪಳ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆಗೈದ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕಸ್ಟಡಿಯಲ್ಲಿ ಮಾರಣಾಂತಿಕ ಹಲ್ಲೆಗೈದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಪಡೆದು ಇದೀಗ ಗಂಗಾವತಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ ರಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಚಾಂದ್ ಸಲ್ಮಾನ್ ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಕ್ಯಾಂಪಸ್ ಫ್ರಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ ಅವರು, ಕೊಪ್ಪಳ ಪೊಲೀಸರ ಈ ಅಮಾನವೀಯ ವರ್ತನೆಯನ್ನು ಖಂಡಿಸಿದರು. ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಬಂಧಿಸಿ ಜೈಲಿಗಟ್ಟಿದ್ದು ಮಾತ್ರವಲ್ಲದೆ ಕಸ್ಟಡಿಯಲ್ಲಿ ಬೂಟಿನಿಂದ ಒದ್ದು ಹಲ್ಲೆಗೈದಿದ್ದು ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಕ್ರೂರತೆಯನ್ನು ಮೆರೆದ ಕೊಪ್ಪಳ ಪೊಲೀಸರ ಮೇಲೆ ಪ್ರಕರಣ ದಾಖಲಿಸಿ ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.
ಇಲ್ಲದಿದ್ದಲ್ಲಿ ಹೋರಾಟವನ್ನು ಇನ್ನೂ ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.
ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ರಾಜ್ಯ ಸಮಿತಿ ಸದಸ್ಯರಾದ ಹಸನ್ ಸಿರಾಜ್ ಇದ್ದರು.

Join Whatsapp
Exit mobile version