ಫೆಲೋಶಿಪ್ ಕಡಿತಗೊಳಿಸಿದ ಆದೇಶವನ್ನು ಹಿಂಪಡೆದ ರಾಜ್ಯ ಸರಕಾರದ ಕ್ರಮ ಸ್ವಾಗತಾರ್ಹ : ಕ್ಯಾಂಪಸ್ ಫ್ರಂಟ್

Prasthutha: April 21, 2021

ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ ಪಿ ಎಚ್ ಡಿ / ಎಂ ಫಿಲ್ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಫೆಲೋಶಿಪ್ ನ್ನು ಕಡಿತಗೊಳಿಸುವ ಕುರಿತು ರಾಜ್ಯ ಸರಕಾರದಿಂದ ಆದೇಶ ಹೊರಡಿಸಲಾಗಿತ್ತು. ಇದರ ವಿರುದ್ಧ ರಾಜ್ಯಾದ್ಯಂತ ಕ್ಯಾಂಪಸ್ ಫ್ರಂಟ್ ಹಲವು ರೀತಿಯ ಪ್ರತಿಭಟನೆಗಳನ್ನು ನಡೆಸಿ ರಾಜ್ಯ ಸರಕಾರದ ವಿದ್ಯಾರ್ಥಿ ವಿರೋಧಿ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಸಂಶೋಧನಾ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಹಲವು ರೀತಿಯ ಅಡೆತಡೆಗಳನ್ನು ಎದುರಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಸೃಜನಶೀಲ ವಿಚಾರಗಳ ಮೂಲಕ ಹಲವಾರು ಸಮಾಜಮುಖಿ ಬದಲಾವಣೆಗಳಿಗೆ ಕಾರಣರಾಗಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅವರ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ರೂಪಿಸುವುದು ಸರಕಾರದ ಜವಾಬ್ದಾರಿಯಾಗಿರುತ್ತದೆ. ಹಿಂದೆ ಫೆಲೋಶಿಪ್ ಕಡಿತಗೊಳಿಸಿ ಅದೇಶಿಸಿದ್ದ ರಾಜ್ಯ ಸರಕಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ತನ್ನ ತಪ್ಪಿನ ಅರಿವಿನಿಂದಾಗಿ ಫೆಲೋಶಿಪ್
ಕಡಿತಗೊಳಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದದ್ದು ಒಳ್ಳೆಯ ವಿಚಾರ, ಈ ಹೋರಾಟದ ಭಾಗವಾಗಿ ವಿದ್ಯಾರ್ಥಿಗಳ ಧ್ವನಿಯಾದ ಪ್ರತಿಯೊಬ್ಬರಿಗೂ ಕ್ಯಾಂಪಸ್ ಫ್ರಂಟ್ ಅಭಿನಂದಿಸುತ್ತದೆ, ಮುಂದಿನ ದಿನಗಳಲ್ಲಿ ಆಗುವ ಅನ್ಯಾಯಗಳ, ತಾರತಮ್ಯ ನೀತಿಗಳ ವಿರುದ್ಧ ಹೀಗೆ ಧ್ವನಿಯಾಗುವಿರಿ ಎಂಬ ಬಯಕೆಯೊಂದಿಗೆ ಈ ಹೋರಾಟದಲ್ಲಿ ಹಲವು ಸಾಮಾಜಿಕ ಸಂಘಟನೆಗಳು, ವಿದ್ಯಾರ್ಥಿಗಳು ಕೈಜೋಡಿಸಿದ ಫಲವಾಗಿ ಸಮಾಧಾನಕರ ಫಲಿತಾಂಶ ದೊರೆತಿದೆ ಎಂದು ಕ್ಯಾಂಪಸ್ ಫ್ರಂಟ್ ಕರ್ಣಾಟಕ ರಾಜ್ಯ ಕೋಶಾಧಿಕರಿಗಳಾದ ಸವಾದ್ ಕಲ್ಲರ್ಪೆ ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!