ಪ್ರಶ್ನೆ ಪತ್ರಿಕೆ ಸೋರಿಕೆ: ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮಂಡಳಿ ಅಧ್ಯಕ್ಷೆ ವಜಾ

Prasthutha|

ಲಕ್ನೋ: ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ಅವರನ್ನು ವಜಾಗೊಳಿಸಲಾಗಿದೆ.

- Advertisement -

ಉತ್ತರ ಪ್ರದೇಶ ಸರ್ಕಾರ ರೇಣುಕಾ ಮಿಶ್ರಾ ಅವರನ್ನು ವಜಾಗೊಳಿಸಿದ್ದು, ರಾಜೀವ್ ಕೃಷ್ಣ ಅವರಿಗೆ ನೇಮಕಾತಿ ಮಂಡಳಿಯ ಜವಾಬ್ದಾರಿಯನ್ನು ನೀಡಿದೆ.

ಫೆಬ್ರವರಿ 17 ಮತ್ತು 18ರಂದು ಉತ್ತರ ಪ್ರದೇಶದಲ್ಲಿ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. 60,000ಕ್ಕೂ ಹೆಚ್ಚು ಕಾನ್ಸ್‌ ಟೇಬಲ್‌ ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 48 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

Join Whatsapp