ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿ ಪ್ರಸಾದ್​ ಮತ್ತೆ ಪೊಲೀಸ್‌ ವಶಕ್ಕೆ

Prasthutha|

- Advertisement -

ಉಡುಪಿ: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್​ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.