ಬಂಧನದ ವೇಳೆ ಚೈತ್ರಾ ಕುಂದಾಪುರ ಹೈಡ್ರಾಮ

Prasthutha|

- Advertisement -

ಪೊಲೀಸ್ ವಾಹನದ ಗಾಜು – ಒಡೆದು, ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ

ಉಡುಪಿ: ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಪ್ರಚೋದನಕಾರಿ ಭಾಷಣಕಾರ್ತಿ
ಚೈತ್ರಾ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮ ನಡೆಸಿರುವುದು ಬೆಳಕಿಗೆ ಬಂದಿದೆ.

- Advertisement -

ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಪೊಲೀಸ್ ವಾಹನದ ಗಾಜು ಒಡೆಯಲು ಯತ್ನಿಸಿ ಹೈಡ್ರಾಮ ಮಾಡಿದ್ದಾಳೆ. ಆತ್ಮಹತ್ಯೆ ಮಾಡುವುದಾಗಿ ಉಂಗುರ ನುಂಗಲು ಪ್ರಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.

ಚೈತ್ರಾಳ ನಾಟಕಕ್ಕೆ ಸೊಪ್ಪು ಹಾಕದ ಸಿಸಿಬಿ ಪೊಲೀಸರು ಆಕೆಯನ್ನು ಕಾರಿನಲ್ಲಿ ಬೆಂಗಳೂರಿನತ್ತ ಕರೆದುಕೊಂಡು ಹೋಗಿದ್ದಾರೆ.

Join Whatsapp