ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪೊಲೀಸ್ ವಶಕ್ಕೆ

Prasthutha|

- Advertisement -

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಮಂಗಳವಾರ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ.