ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಅ. 6ರ ವರೆಗೆ ನ್ಯಾಯಾಂಗ ಬಂಧನ

Prasthutha|

- Advertisement -

ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರೆ ಆರು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಚೈತ್ರಾ ಕುಂದಾಪುರ ಸೇರಿದಂತೆ ಇತರೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Join Whatsapp