ಬಿಜೆಪಿಯಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಎನ್ನುವುದು ಚೈತ್ರಾ ಕೇಸ್’ನಲ್ಲಿ ಸಾಬೀತಾಗಿದೆ ಎಂದ ಸಿಟಿ ರವಿ

Prasthutha|

►”ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇರ್ತಾರೆ

- Advertisement -


ನವದೆಹಲಿ: ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಸಿದ ಮಾಜಿ ಶಾಸಕ ಸಿಟಿ ರವಿ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಮಾರಾಟಕ್ಕಿಲ್ಲ ಎನ್ನವುದು ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಸಾಬೀತಾಗಿದೆ. ಸಮಯದ ದುರ್ಬಳಕೆ ಮಾಡಿಕೊಂಡು ಗೋವಿಂದ್ ಬಾಬು ಪೂಜಾರಿಗೆ ವಂಚಿಸುವ ಕೆಲಸ ಮಾಡಿದೆ. ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇರ್ತಾರೆ ಎನ್ನುವುದು ಮರೆಯಬಾರದು ಎಂದು ಹೇಳಿದ್ದಾರೆ.

- Advertisement -

ಬಿಜೆಪಿಯಲ್ಲಿ ಹಣ ಕೊಟ್ಟು ಟಿಕೆಟ್ ಖರೀದಿ ಸಾಧ್ಯವಿಲ್ಲ. ಹಣದ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಮುಂದೆ ಯಾರು ಮಾಡಬಾರದು. ಒಂದು ವೇಳೆ ಮಾಡಿದರೆ ಮತ್ತೊಬ್ಬ ಗೋವಿಂದ ಪೂಜಾರಿ ಆಗುತ್ತೀರಿ ಎಂದು ಎಚ್ಚರಿಕೆ ನೀಡಿದರು.