ಚೈತ್ರಾ ಕುಂದಾಪುರ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

Prasthutha|

- Advertisement -

ಗ್ರಾಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಚೈತ್ರಾ..!

ಚಿಕ್ಕಮಗಳೂರು: ಬಿಜೆಪಿ ಟಿಕೆಟ್ ಕೊಡಿಸುತ್ತೇನೆ ಎಂದು ಉದ್ಯಮಿಗೆ ನಾಮ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ ಬಿಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಜನರ ಸಂಭ್ರಮ ಮುಗಿಲು ಮುಟ್ಟಿತ್ತು.

- Advertisement -

ಚೈತ್ರಾ ಓಡಾಡಿದ ಜಾಗವನ್ನು ಗ್ರಾಮಸ್ಥರು ಸೇರಿ ತೀರ್ಥ ಹಾಕಿ ಶುದ್ಧ ಮಾಡಿದ ಘಟನೆ ಕೂಡ ನಡೆದಿದೆ.

ಭಗವದ್ವಜ ವಿಚಾರವಾಗಿ ಗ್ರಾಮದಲ್ಲಿ ನಡೆದಿದ್ದ ಗಲಾಟೆ

ಕಳೆದ ವರ್ಷ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚೈತ್ರಾ. ಈ ವೇಳೆ ಎರಡು ಕೋಮುಗಳ ನಡುವೆ ಗಲಾಟೆಯಾಗುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಹೀಗಾಗಿ ಗ್ರಾಮ ದೇವರಿಗೆ ಚೈತ್ರಾ ವಿರುದ್ಧ ಪ್ರಾರ್ಥನೆ ಮಾಡಿ, ಒಂದು ವರ್ಷದೊಳಗೆ ಶಿಕ್ಷೆ ನೋಡುವಂತೆ ಗ್ರಾಮಸ್ಥರು ಪ್ರಾರ್ಥನೆ ಮಾಡಿದ್ದರು ಎನ್ನಲಾಗಿದೆ.