ಚೈತ್ರಾ ವಂಚನೆ ಪ್ರಕರಣ: ಆರೋಪಿ ಹಾಲಶ್ರೀ ಸ್ವಾಮಿ ಜೊತೆಗಿದ್ದ ಸೂಲಿಬೆಲೆ ಫೋಟೊ ವೈರಲ್

Prasthutha|

►ಪ್ರಕರಣದಲ್ಲಿ ಸೂಲಿಬೆಲೆ ಇರಬಹುದು ಎಂದು ನೆಟ್ಟಿಗರ ಸಂಶಯ

- Advertisement -


ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 5 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಈ ಪ್ರಕರಣದ ಪ್ರಮುಖ ಆರೋಪಿ (A 3) ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

- Advertisement -


ಈ ನಡುವೆ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಫೋಟೊ ಹಂಚಿಕೊಂಡಿದ್ದು, ಈ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಇರಬಹುದು ಎಂದು ಬರೆದುಕೊಂಡಿದ್ದಾರೆ.


ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.

Join Whatsapp