ಮುಖ ಮುಚ್ಚಿಕೊಂಡು ಸಿಸಿಬಿ ಕಚೇರಿಗೆ ಬಂದ ಚೈತ್ರಾ ಕುಂದಾಪುರ

Prasthutha|

ಬೆಂಗಳೂರು: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರಾಳನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಸಿಸಿಬಿ ಕಚೇರಿಗೆ ಕರೆತಂದ ಬಳಿಕ ಆರೋಪಿಗಳನ್ನು ಮೂರನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದಾರೆ. ಬೆಂಗಳೂರಿನ ಸಿಸಿಬಿ ಕಚೇರಿಗೆ ಕರೆ ತಂದ ಸಮಯದಲ್ಲಿ ತಮ್ಮ ವೇಲ್ನಿಂದ ತಮ್ಮ ಮುಖವನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿಕೊಂಡು ಚೈತ್ರಾ ಕುಂದಾಪುರ ಎಂಟ್ರಿ ಕೊಟ್ಟಿದ್ದರು. ತನಿಖಾ ತಂಡ ಪ್ರಕರಣದ ಐಒ ಎಸಿಪಿ ರೀನಾ ಸುವರ್ಣ ಅವರ ಎದುರು ಚೈತ್ರಾ ಕುಂದಾಪುರ ಅವರನ್ನು ಹಾಜರುಪಡಿಸಿದ್ದಾರೆ.



Join Whatsapp