ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್: ಇನ್ನು ಸಿಸಿಬಿ ಗ್ರಿಲ್ ಶುರು!

Prasthutha|

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ 5 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಕಳೆದ ಮೂರುವರೆ ದಿನಗಳಿಂದ ಅನಾರೋಗ್ಯದ ಹೆಸರಿನಲ್ಲಿ ನಡೆಸಿದ ನಾಟಕ ಬಂದ್ ಆಗಿದೆ.

- Advertisement -


ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ದೃಢೀಕರಿಸಿ ಸೋಮವಾರ ಮಧ್ಯಾಹ್ನ ಆಕೆಯನ್ನು ಡಿಸ್ಚಾರ್ಜ್ ಮಾಡಿದ್ದಾರೆ.


ಬಳಿಕ ಆಕೆಯನ್ನು ಆಸ್ಪತ್ರೆಯಿಂದ ಸಿಸಿಬಿ ಕಚೇರಿಗೆ. ಮಂಗಳವಾರದಿಂದ ಆಕೆಯ ವಿಚಾರಣೆ ಮತ್ತೆ ಶುರುವಾಗಲಿದೆ.