ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮೀಜಿ ಬಂಧನ

Prasthutha|

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಒಡಿಶಾದಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

- Advertisement -

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದಾರೆ.

ಒಡಿಶಾದ ಕಟಕ್ ನಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ.