ಬೆಂಗಳೂರು: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.ಸದ್ಯ ಬಂಧಿತನಾಗಿರುವ ಎ3 ಆರೋಪಿ ಹಾಲಶ್ರೀ ಸ್ವಾಮಿ ಅವರನ್ನು ನ್ಯಾಯಾಲಯವು ಸೆ.29ರವರೆಗೆ ಸಿಸಿಬಿ ವಶಕ್ಕೆ ನೀಡಿದೆ.
ಪ್ರಕರಣದ ಎ3 ಆರೋಪಿಯಾಗಿರುವ ಹಾಲಶ್ರೀ ಸ್ವಾಮಿ ಅವರಿಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ಕೋರಿದರಾದರೂ, ಈ ಮನವಿಯನ್ನು ತಿರಸ್ಕರಿಸಿರುವ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿದೆ.