ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸಾಕ್ಷಿ ಹೇಳದಂತೆ ವ್ಯಕ್ತಿ ಮೇಲೆ ಹಲ್ಲೆ ಆರೋಪ

Prasthutha|

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಹೊರಗಿರುವ ಪ್ರಕರಣದ ಪ್ರಮುಖ ಆರೋಪಿ ಧನರಾಜ್, ಸಲೂನ್ ಮಾಲೀಕ ರಾಮು ಮೇಲೆ ಹಲ್ಲೆ ಮಾಡಿ, ಸಾಕ್ಷಿ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ.

- Advertisement -

ರಾಮು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ದೂರು ನೀಡಿದರೂ ಕೂಡ ಬೀರೂರು ಠಾಣೆಯ ಪೊಲೀಸರು ಮಾತ್ರ ಪ್ರಕರಣ ದಾಖಲಿಸಿಲ್ಲ. ಈ ಹಿನ್ನೆಲೆ ನ್ಯಾಯಕ್ಕಾಗಿ ರಾಮು ಕುಟುಂಬ ಎಸ್ಪಿ ಕಚೇರಿ ಮೊರೆ ಹೋಗಿದ್ದಾರೆ. ಚೈತ್ರಾ ವಂಚನೆ ಪ್ರಕರಣದಲ್ಲಿ ಗೋಪಾಲ್ ಜೀ ಪಾತ್ರ ಸೃಷ್ಟಿಸಿ ಕಡೂರಿನ ರಾಮು ಸಲೂನ್ನಲ್ಲಿ ಚೆನ್ನಾ ನಾಯ್ಕಗೆ ಧನರಾಜ್ ಮೇಕಪ್ ಮಾಡಿಸಿದ್ದ. ಈ ಹಿನ್ನೆಲೆಯಲ್ಲಿ ರಾಮು ವಂಚನೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾರೆ. ಆದ್ದರಿಂದಲೇ ಧನರಾಜ್ ರಾಮುವಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ.

ಪ್ರಕರಣ ದಾಖಲಿಸದ ಬೀರೂರು ಪೊಲೀಸರ ವಿರುದ್ಧ ರಾಮು ಕುಟುಂಬ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಸೋಮವಾರ(ಮಾ.25) ಕಡೂರಿನ ಹೋಟೆಲ್ ನಲ್ಲಿ ಹಲ್ಲೆ ನಡೆದಿರುವ ಸಂಬಂಧ ರಾಮು ಅವರು ಬೀರೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಕಳೆದ ತಿಂಗಳು ಧನರಾಜ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.



Join Whatsapp