Home ಟಾಪ್ ಸುದ್ದಿಗಳು ಚೈತ್ರ ಕುಂದಾಪುರ ವಂಚನೆ ಪ್ರಕರಣ: ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು?

ಚೈತ್ರ ಕುಂದಾಪುರ ವಂಚನೆ ಪ್ರಕರಣ: ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು?

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಚೈತ್ರ ಕುಂದಾಪುರ ಹೊಸ ಮನೆಯೊಂದು ಕಟ್ಟಿಸುತ್ತಿದ್ದರು ಎನ್ನಲಾಗಿದೆ. ಚೈತ್ರ ಕೋಟಿ ಲೂಟಿ ಹೊಡೆದು ಗೆಳೆಯನ ಹೆಸರಲ್ಲಿ ಮನೆ ಕಟ್ಟಿಸುತ್ತಿರುವುದು ಪತ್ತೆಯಾಗಿದೆ.


ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ ಚೈತ್ರಾ ಮತ್ತು ಏಳು ಜನರ ಗ್ಯಾಂಗ್ ಬರೋಬ್ಬರಿ 5.50 ಕೋಟಿ ರೂ. ಪೀಕಿಸಿದೆ. ಟಿಕೆಟ್ ಸಿಗದೆ ಕಾಸು ಕಳೆದುಕೊಂಡ ಗೋವಿಂದ ಪೂಜಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚೈತ್ರಾ ಮತ್ತು ತಂಡ ಆ ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ? ಯಾರಿಗೆ ಎಷ್ಟೆಷ್ಟು ಹಂಚಿದ್ದಾರೆ ಎಂದು ಇನ್ನಷ್ಟೇ ವಿಚಾರಗಳು ಬಹಿರಂಗ ಆಗಬೇಕಾಗಿದೆ.


ಈ ನಡುವೆ ಚೈತ್ರಾ ಕಾರ್ಕಳದ ಕಣಜಾರು ಪ್ರದೇಶದಲ್ಲಿ ಜಾಗ ಖರೀದಿ ಮಾಡಿ ಶ್ರೀಕಾಂತ್ ಹೆಸರಿನಲ್ಲಿ ಮನೆ ಕಟ್ಟಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಆದರೆ ಶ್ರೀಕಾಂತ್ನ್ನು ವಶಕ್ಕೆ ಪಡೆದ ಬಳಿಕ ಮನೆಯ ಕಾಮಗಾರಿ ಅರ್ಧದಲ್ಲೇ ನಿಂತಿದೆ ಎನ್ನಲಾಗುತ್ತಿದೆ. ಜಮೀನು ಮತ್ತು ಮನೆಗೆ ಒಟ್ಟು ಒಂದು ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಶ್ರೀಕಾಂತ್ ನಾಯಕ್ ಈ ಮನೆಯನ್ನು ಕಟ್ಟಿಸುತ್ತಿದ್ದಾರೋ ಅಥವಾ ಚೈತ್ರಾ ಕುಂದಾಪುರ ಹೂಡಿಕೆ ಮಾಡಿದ್ದಾರೋ ಎಂಬ ವಿಚಾರಗಳು ಇನ್ನಷ್ಟೇ ತನಿಖೆಯಿಂದ ಹೊರ ಬರಬೇಕಾಗಿದೆ.

Join Whatsapp
Exit mobile version