ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಈ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವುದಿಲ್ಲ: ಕಾಂಗ್ರೆಸ್

Prasthutha|

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

- Advertisement -

ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆದಿದ್ದು, ವಂಚನೆ ನಡೆದಿದ್ದು ಎಲ್ಲವೂ ಸಿಟಿ ರವಿ ಹಾಗೂ ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ತಿಳಿದಿತ್ತಂತೆ ಎಂದು ಹೇಳಿದೆ.


ಬಿಜೆಪಿ ಅಕ್ರಮವೊಂದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇಕೆ ಎಂದು ಪ್ರಶ್ನಿಸಿದೆ. ಬಿಜೆಪಿ ನಿಜಕ್ಕೂ ಹಣ ವಸೂಲಿ ಮಾಡಿ ಟಿಕೆಟ್ ನೀಡುವ ಕೆಲಸ ಮಾಡಿತ್ತೇ? ಎಂದು ಕೇಳಿದೆ. ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ, ಸೂಕ್ತ ಸಾಕ್ಷ್ಯಧಾರವಿದ್ದರೆ ಬಿಜೆಪಿಯ ದಂಡನಾಯಕರನ್ನೂ ಬಂಧಿಸಿ ವಿಚಾರಣೆ ನಡೆಸಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲ ಎಂದು ತಿಳಿಸಿದೆ.

- Advertisement -



Join Whatsapp