ಚೈತ್ರಾ ಕುಂದಾಪುರಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ: ಆರಗ ಜ್ಞಾನೇಂದ್ರ

Prasthutha|

- Advertisement -

ಶಿವಮೊಗ್ಗ: ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಆಕೆ ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲಿ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಅವರ ಪ್ರಕರಣವನ್ನು ನಾನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಸಿಸಿಬಿ ತನಿಖೆ ನಡೆಯುತ್ತಿದೆ, ತನಿಖೆ ನಂತರ ಎಲ್ಲವೂ ಹೊರಬರುತ್ತದೆ ಎಂದು ಹೇಳಿದರು.